Elli hutti ello bedeu lyrics ( Kannada ) – C Ashwath – super cine lyrics

Ello hutti ello beledu – C Ashwath Lyrics

Singer C Ashwath

About the song

▪ Song: Ello Hutti Ello Beledu
▪ Program: Bhava Bindu
▪ Singer: C Ashwath
▪ Music Director: C Ashwath
▪ Lyrics: Chandrashekar Patil
▪ Music Label : Lahari Music

Ello hutti ello beledu Lyrics

ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ
ಒಳಗೊಳಗೇ ಕೊರೆಯುವವಳು,
ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ
ಒಳಗೊಳಗೇ ಕೊರೆಯುವವಳು,
ಸದಾ… ಗುಪ್ತಗಾಮಿನಿ ನನ್ನ ಶಾಲ್ಮಲಾ.
ಸದಾ… ಗುಪ್ತಗಾಮಿನಿ ನನ್ನ ಶಾಲ್ಮಲಾ…
ಹಸಿರು ಮುರಿವ ಎಲೆಗಳಲ್ಲಿ
ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ
ಬೆಂಕಿ ಹಾಡು ಉಸುರುವವಳು,
ಹಸಿರು ಮುರಿವ ಎಲೆಗಳಲ್ಲಿ
ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ
ಬೆಂಕಿ ಹಾಡು ಉಸುರುವವಳು,
ಸದಾ… ತಪ್ತಕಾಮಿನಿ ನನ್ನ ಶಾಲ್ಮಲಾ.
ಭೂಗರ್ಭದ ಮೌನದಲ್ಲಿ
ಧುಮ್ಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ
ಕನಸಿನಲ್ಲಿ ತುಳುಕುವವಳು,
ಭೂಗರ್ಭದ ಮೌನದಲ್ಲಿ
ಧುಮ್ಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ
ಕನಸಿನಲ್ಲಿ ತುಳುಕುವವಳು,
ಸದಾ… ಸುಪ್ತಮೋಹಿನಿ
ನನ್ನ ಶಾಲ್ಮಲಾ.
ಸದಾ… ಸುಪ್ತಮೋಹಿನಿ
ನನ್ನ ಶಾಲ್ಮಲಾ.
ನನ್ನ ಬದುಕ ಭುವನೇಶ್ವರಿ
ನನ್ನ ಶಾಲ್ಮಲಾ,
ನನ್ನ ಹೃದಯ ರಾಜೇಶ್ವರಿ
ನನ್ನ ಶಾಲ್ಮಲಾ,
ನನ್ನ ಬದುಕ ಭುವನೇಶ್ವರಿ
ನನ್ನ ಶಾಲ್ಮಲಾ,
ನನ್ನ ಹೃದಯ ರಾಜೇಶ್ವರಿ
ನನ್ನ ಶಾಲ್ಮಲಾ,
ಸದಾ… ಗುಪ್ತಗಾಮಿನಿ
ನನ್ನ ಶಾಲ್ಮಲಾ.
ಸದಾ… ಗುಪ್ತಗಾಮಿನಿ
ನನ್ನ ಶಾಲ್ಮಲಾ.

Leave a Comment

Contact Us